Index   ವಚನ - 3    Search  
 
ಆ ಬೊಕ್ಕಸದ ಮನೆಯಿಪ್ಪ ಭೇದ : ಹೊರಗಣ ಹೊದಕೆ ನಾನಾ ಚಿತ್ರವಿಚಿತ್ರ. ಮಳೆಗೆ ನೆನವುದು,ಬೆಂಕಿಗೆ ಬೇವುದು,ಗಾಳಿಗೆ ಮುರಿಯುವುದು. ಆ ಮನೆಗೆ ವಿರೋಧವಾಹಲ್ಲಿ ಪಟ್ಟಿ ಕೆಡದು ದೇವಾಂಗ ಬೇಯದು, ರತ್ನ ಗಾಳಿಯ ತಪ್ಪಲಿಗೆ ಒಳಗಾಗದು. ಈ ಬೊಕ್ಕಸದ ಮನೆಯ ಹೊರಗಣ ಕೇಡು, ಒಳಗಣ ಲಾಭವ ನಿರೀಕ್ಷಿಸಿ ನೋಡಬೇಕು, ಬಸವಣ್ಣಪ್ರಿಯ ನಾಗರೇಶ್ವರಲಿಂಗವ ಕೇಳಬೇಕು.