Index   ವಚನ - 11    Search  
 
ಭರಿತಾರ್ಪಣ ಸಹಭೋಜನ ನೈವೇದ್ಯ ಸಹ ಇಂತೀ ತ್ರಿವಿಧ ಭೇದಂಗಳ ಅಂಗೀಕರಿಸಿದ ಮತ್ತೆ ಕರುಳಿಲ್ಲದ ಕಲಿಯಂತೆ, ಒಡಲಿಲ್ಲದ ಅಂಗದಂತೆ, ಸಂಗವಿಲ್ಲದ ನಿರಂಗದಂತೆ, ದಗ್ಧಪಟದಂತೆ, ಒಂದನೂ ಹೊದ್ದದ ಬಹುವರ್ಣದಂತೆ, ಅಂಗವಿದ್ದೂ ಅಳಿದು ತೋರುವ ನಿರಂಗಿಗಲ್ಲದೆ ಈ ತ್ರಿವಿಧ ವ್ರತ ಪ್ರಸಾದವಿಲ್ಲ. ನಾನು ಎನಗೆ ಬಂದ ಕುತ್ತಕ್ಕೆ ಹಾಡಿ ಹರಸಿ ಮದ್ದನರೆವುತ್ತಿದ್ದೇನೆ, ಎನ್ನ ಕಾಡಬೇಡ. ಕ್ರೀ ತಪ್ಪದೆ ಎನ್ನ ಕೂಡಿಕೊ, ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.