ವಚನ - 647     
 
ನಿಮ್ಮ ನೆನೆವುತ್ತಿದ್ದಿತ್ತು, ನೆನೆವ ಮುಖವಾವುದೆಂದರಿಯದೆ; ಪೂಜೆಯ ಪೂಜಿಸುತ್ತಿದ್ದಿತ್ತು, ಪೂಜೆಯ ಮುಖವಾವುದೆಂದರಿಯದೆ; ಆಡಿ ಹಾಡಿ ಬೇಡುತ್ತಿದ್ದಿತ್ತು, ಬೇಡುವ ಮುಖವಾವುದೆಂದರಿಯದೆ; ಕಾಯದಲ್ಲಿ ಇಲ್ಲ, ಜೀವದಲ್ಲಿಇಲ್ಲ, ಭಾವದಲ್ಲಿ ಇಲ್ಲ; ಭರಿತವು ಅದು ತಾನಪ್ಪುದು. ತಾನಲ್ಲದುದೇನ ಹೇಳುವೆ ಕೌಸ್ತುಕವ? ಗುಹೇಶ್ವರನೆಂಬ ಹೆಸರೊಳಗಿದ್ದುದ ಬೆಸಗೊಂಬವರಿಲ್ಲ ನಿರಾಳದ ಘನವ!