Index   ವಚನ - 12    Search  
 
ಅಕ್ಕರ ಗಣಿತ ಗಾಂಧರ್ವ ಜ್ಯೋತಿಷ ಆತ್ಮವಿದ್ಯೆ ತರ್ಕ ವ್ಯಾಕರಣ ಅಮರಸಿಂಹ ಛಂದಸ್ಸು ನಿಘಂಟು ಶಾಲಿಹೋತ್ರ ಗ್ರಹವಾದ ಗಾರುಡ ದ್ಯೂತ ವೈಶಿಕಶಾಸ್ತ್ರ ಸಾಮುದ್ರಿಕಶಾಸ್ತ್ರ ಲಕ್ಷಣಶಾಸ್ತ್ರ ಅಶ್ವಶಿಕ್ಷೆ ಗಜಶಿಕ್ಷೆ ಗೋಕರ್ಣ ದಾಡಾಬಂಧ ಮೂಲಿಕಾಸಿದ್ಧಿ ಭೂಚರತ್ವ ಖೇಚರತ್ವ ಅತೀತ ಅನಾಗತ ವರ್ತಮಾನ ಸ್ಥೂಲ ಸೂಕ್ಷ್ಮ ಇಂದ್ರಜಾಲ ಮಹೇಂದ್ರಜಾಲ ವಡ್ಯಾಣಬಂಧಚೇಷ್ಟೆ ಪರಕಾಯಪ್ರವೇಶ ದೂರದೃಷ್ಟಿ ದೂರಶ್ರವಣ ಋಗ್ಯಜುಃಸಾಮಾಥರ್ವಣ ಶ್ರುತಿಸ್ಮೃತಿ ಆಯುರ್ದಾಯ ನಷ್ಟಿಕಾಮುಷ್ಟಿಚಿಂತನೆ ಚೋರವಿದ್ಯೆ ಅಮೃತೋದಯ ಭಾಷಾಪರೀಕ್ಷೆ ವೀಣಾವಿದ್ಯೆ ಭೃಂಗಿವಿದ್ಯೆ ಮಲ್ಲವಿದ್ಯೆ ಶಸ್ತ್ರವಿದ್ಯೆ ಧನುರ್ವಿದ್ಯೆ ಅಗ್ನಿಸ್ತಂಭ ಜಲಸ್ತಂಭ ವಾಯುಸ್ತಂಭ ವಾದವಶ್ಯ ಅಂಜನಾಸಿದ್ಧಿ ಘುಟಿಕಾಸಿದ್ಧಿ ಮಂತ್ರತಂತ್ರಸಿದ್ಧಿ ಇವೆಲ್ಲವ ಕಲಿತಡೇನು ಅರುವತ್ನಾಲ್ಕು ವಿದ್ಯಾಪ್ರವೀಣನೆನಿಸಿಕೊಂಬನಲ್ಲದೆ ಲಿಂಗವಂತನೆನಿಸಿಕೊಂಬುದಿಲ್ಲ. ಲಿಂಗವುಳ್ಳ ಶಿವಭಕ್ತಂಗೆ ಇವರೆಲ್ಲರೂ ಕೂಡಿ ಸರಿಬಾರದೆಂದ ನಮ್ಮ ಕಲಿದೇವರದೇವ.