Index   ವಚನ - 24    Search  
 
ಅಯ್ಯಾ, ತನ್ನ ತಾನರಿಯದೆ, ತನ್ನ ಇಷ್ಟಲಿಂಗದ ಹೊಲಬು ತಿಳಿಯದೆ, ಕಾಮವ ತೊರೆಯದೆ, ಹೇಮವ ಜರೆಯದೆ, ನಾವು ಹರ ಗುರು ಚರ ಷಟ್‍ಸ್ಥಲದ ವಿರಕ್ತರೆಂದು ಚೆನ್ನಾಗಿ ನುಡಿದುಕೊಂಡು, ಕಾವಿ ಕಾಷಾಯಾಂಬರವ ಹೊದ್ದು, ಶಂಖ ಗಿಳಿಲು ದಂಡಾಗ್ರವ ಹೊತ್ತು,ಕೂಳಿಗಾಗಿ ನಾನಾ ದೇಶವ ತಿರುಗಿ, ಕಾಂಚನಕ್ಕೆ ಕೈಯೊಡ್ಡುವ ಪಂಚಮಹಾಪಾತಕರನು ಕಾಗೆಯ ಗರ್ಭದಲ್ಲಿ ಹುಟ್ಟಿಸಿ ಕಾಕಾ ಎಂದು ಕೂಗಿಸುತಿರ್ಪ[ನು] ಕಾಣಾ, ಕಲಿದೇವರದೇವ.