ವಚನ - 650     
 
ಭೂಮಿಯೊಳಗಿಲ್ಲ ಆಕಾಶದೊಳಗಿಲ್ಲ: ಚತುರ್ದಶ ಭುವನದೊಳಗಿಲ್ಲ, ಹೊರಗಿಲ್ಲ. ಏನೆಂದರಿಯರು ಎಂತೆಂದರಿಯರು ಹೇಳಿರಯ್ಯಾ? ಕೃತಯುಗದಂದಿನ ಮಾತು ಬೇಡ ಗುಹೇಶ್ವರ ಅಂದೂ ಇಲ್ಲ, ಇಂದೂ ಇಲ್ಲ.