Index   ವಚನ - 69    Search  
 
ಇಂದ್ರಲೋಕದವರೆಲ್ಲರೂ ಸೂತಕಸಂಹಾರಿ ಬಸವ ಎಂದೆಂಬರು. ಚಂದ್ರಲೋಕದವರೆಲ್ಲರೂ ಷೋಡಶಕಲಾ ಪರಿಪೂರ್ಣ ಬಸವಾ ಎಂದೆಂಬರು. ಯುಗಕೋಟಿಬ್ರಹ್ಮರೆಲ್ಲರೂ ಪರಶಿವ ಬಸವಾ ಎಂದೆಂಬರು. ಹರಿವಿರಿಂಚಿಗಳೆಲ್ಲರೂ ಗುರುಲಿಂಗ ಬಸವಾ ಎಂದೆಂಬರು. ಅಷ್ಟದಿಕ್ಪಾಲಕರೆಲ್ಲರೂ ಪರಶಿವ ಬಸವಾ ಎಂದೆಂಬರು. ಸುರಪಡೆಯವರೆಲ್ಲರೂ ಅಮೃತಸಾಗರ ಬಸವಾ ಎಂದೆಂಬರು. ನವನಾಥಸಿದ್ಧರೆಲ್ಲರೂ ಪರಮಘುಟಿಕೆ ಬಸವಾ ಎಂದೆಂಬರು. ಲಂಬೋದರ ಕುಂಭೋದರ ದಾರುಕ ರೇಣುಕ ಗೌರೀಸುತ ತಾಂಡವರೆಲ್ಲರೂ ಸಕಲಜೀವಚೈತನ್ಯ ಮಾತ್ರ ಬಸವಾ ಎಂದೆಂಬರು. ಓತವರೆಲ್ಲರೂ ಮಾತಾಪಿತ ಬಸವಾ ಎಂದೆಂಬರು. ಒಲಿದವರೆಲ್ಲರೂ ಪ್ರಾಣ ಪರಿಣಾಮಿ ಬಸವಾ ಎಂದೆಂಬರು. ಆನೇನೆಂಬೆನು, ಉಪಮಿಸಬಾರದ ಮಹಾಘನ ಮಹಿಮನ. ಕಲಿದೇವಾ,ನಿಮ್ಮ ಶರಣ ಬಸವಣ್ಣಇಂತಹ ಮಹಿಮ ನೋಡಯ್ಯಾ.