Index   ವಚನ - 79    Search  
 
ಉಟ್ಟ ಸೀರೆಯ ಹರಿದು ಹೋದಾತ ನೀನಲಾ ಬಸವಣ್ಣ. ಮೆಟ್ಟಿದ ಕೆರಹ ಕಳೆದುಹೋದಾತ ನೀನಲಾ ಬಸವಣ್ಣ. ಕಟ್ಟಿದ ಮುಡಿಯ ಬಿಟ್ಟುಹೋದಾತ ನೀನಲಾ ಬಸವಣ್ಣ. ಸೀಮೆಸಂಬಂಧವ ತಪ್ಪಿಸಿಹೋದಾತ ನೀನಲಾ ಬಸವಣ್ಣ. ಲಿಂಗಕ್ಕೆ ಮಾಡಿದುದ ಸೋಂಕದೆ ಹೋದೆಯಲ್ಲಾ ಬಸವಣ್ಣ. ಜಂಗಮಕ್ಕೆ ಮಾಡಿದ ಮಾಟವ ಕೈಯಲ್ಲಿ ಹಿಡಿದುಕೊಂಡು ಹೋದೆಯಲ್ಲಾ ಬಸವಣ್ಣ. ಬೆಳಗನುಟ್ಟು ಬಯಲಾಗಿ ಹೋದೆಯಲ್ಲಾ ಬಸವಣ್ಣ. ಆ ಬಸವಣ್ಣಂಗೆ ಶರಣೆಂಬ ಪಥವನೆ ತೋರು ಕಂಡಾ ಕಲಿದೇವರದೇವಾ.