Index   ವಚನ - 90    Search  
 
ಎನ್ನ ಆದಿಯನೆತ್ತುವೆನೆ ? ಅದ ನೀನೆ ಬಲ್ಲೆ, ಘನಗಂಭೀರದಲ್ಲಿ ಹುಟ್ಟಿದನೆಂಬುದ. ಎನ್ನ ಅನಾದಿಯನೆತ್ತಿ ಹೇಳಿ ತೋರುವೆನೆ ? ಅದು ನೀನೆ ಬಲ್ಲೆ, ಎನಗೆ ಕಾಯವಿಲ್ಲೆಂಬುದ. ಬಸವಣ್ಣನ ಕಾರಣ ಮರ್ತ್ಯಕ್ಕೆ ಬಂದಡೆ ಒಡಲುಪಾಧಿಯೆಂಬುದಿಲ್ಲ ನೋಡಾ. ಒಡಲೆ ಬಸವಣ್ಣ, ಪ್ರಾಣವೆ ಚೆನ್ನಬಸವಣ್ಣ, ಎನ್ನ ಮಹಾಜ್ಞಾನವೇ ನೀವು ನೋಡಾ. ಇಂತು ಎರಡಿಲ್ಲದಿಪ್ಪಲ್ಲಿ, ನುಡಿಯಡಗಿದ ಪರಿಯ, ನಿಮ್ಮ ಶರಣ ಬಸವಣ್ಣ ಬಲ್ಲ ಕಾಣಾ, ಕಲಿದೇವರದೇವ.