Index   ವಚನ - 124    Search  
 
ಕಾಲಲ್ಲಿ ಕೂರಲಗ ಮೊನೆಯಲ್ಲಿರಿಸಿಕೊಂಡು, ಸತ್ತುಹೋದವರ ಸಾಮರ್ಥಿಕೆಯ ಹೊಗಳಿ, ಹೊಟ್ಟೆಯ ಹೊರೆವ ಕವಿಗಳು ಕೋಟ್ಯಾನುಕೋಟಿ. ಅರ್ಥವುಳ್ಳವರ ಅಗ್ಗಳಿಕೆಯ ಹೊಗಳುವ ಕವಿಗಳು ಕೋಟ್ಯಾನುಕೋಟಿ. ಲಿಂಗವ ಹೊಗಳಿ ಹೊಗಳಿ, ಅಂಗದ ಸೂತಕ ಹಿಂಗಿಸಿ, ಜಂಗಮದ ದಾಸೋಹದಿಂದ ಸರ್ವಾಂಗಲಿಂಗಿಯಾದ ಭಕ್ತನಂಗಳವೆನಗೆ ವಾರಣಾಸಿ, ಗಾಯತ್ರಿ, ಮಲಪ್ರಹರಿಯಿಂದಧಿಕವಯ್ಯಾ, ಕಲಿದೇವರದೇವಯ್ಯ.