Index   ವಚನ - 133    Search  
 
ಕೊಂಬನೂದುವ ಹೊಲೆಯಂಗೆ ಕುಂಕುಮ ಹಣೆಯಲ್ಲಲ್ಲದೆ ಶ್ರೀವಿಭೂತಿ ಒಪ್ಪುವುದೆ? ಲಿಂಗಲಾಂಛನವ ತೊಟ್ಟು, ಗುರೂಪದೇಶವ ಹೇಳಿ, ನೊಸಲಲ್ಲಿ ವಿಭೂತಿಪಟ್ಟವ ಕಟ್ಟಿದ ಬಳಿಕ, ಮರಳಿ ಗುರುನಿಂದಕನಾಗಿ, ಹಣೆಯಲ್ಲಿ ಕುಂಕುಮಾದಿ ತಿಲಕವ ಕೊಂಡಡವನಾ ಕೊಂಬಿನ ಹೊಲೆಯಂಗಿಂದ ಕನಿಷ್ಠವೆಂದ, ಕಲಿದೇವಯ್ಯ.