Index   ವಚನ - 142    Search  
 
ಗುಂಗುರಿಗೆ ಸುಂಡಿಲು ಹುಟ್ಟಿದೆಡೆ ಆನೆಯಾಗಬಲ್ಲುದೆ ? ನೊಣವಿಂಗೆ ಪಕ್ಕ ಹುಟ್ಟಿದೆಡೆ ಶರಭನಾಗಬಲ್ಲುದೆ ? ಕಾಗೆ ಕೋಗಿಲೆಯು ಒಂದೆಯಾದೆಡೆ ಕೋಗಿಲೆಯಂತೆ ಸ್ವರಗೆಯ್ಯಬಲ್ಲುದೆ ? ಶ್ವಾನನ ನಡು ಸಣ್ಣನಾದಡೆ ಸಿಂಹನಾಗಬಲ್ಲುದೆ? ಅಂಗದ ಮೇಲೆ ವಿಭೂತಿ ರುದ್ರಾಕ್ಷಿ ಶಿವಲಿಂಗವಿದ್ದಡೇನು ನಿಮ್ಮ ನಂಬಿದ ಸತ್ಯದಾಚಾರವುಳ್ಳ ಏಕಲಿಂಗನಿಷ್ಠಾವಂತರಿಗೆ ಸರಿಯೆನ್ನಬಹುದೆ ಅಯ್ಯಾ ? ಇಂಥ ಗುರುಲಿಂಗಜಂಗಮವ ನೆರೆ ನಂಬದೆ, ಪಾದತೀರ್ಥ ಪ್ರಸಾದದಿರವನರಿಯದೆ, ಬರಿದೆ ಭಕ್ತರೆಂದು ಬೊಗಳುವ ದುರಾಚಾರಿಯ ತೋರದಿರಯ್ಯಾ ಕಲಿದೇವರದೇವಾ.