Index   ವಚನ - 162    Search  
 
ಚಂದ್ರ ತಾರಾ ಮಂಡಲಕ್ಕೆ ಒಂದೆರಡು ಯೋಜನಪ್ರಮಾಣು ಹರಿವ ಕಂಗಳು, ಒಂದು ಸಾಸಿವೆರಜ ತನ್ನ ತಾಗದು. ಛಂದಸ್ಸು ನಿಘಂಟು ವ್ಯಾಕರಣ ಅದ್ವೈತ ವೇದ ಶಾಸ್ತ್ರ ಪುರಾಣವನೋದಿಕೊಂಡು ಮುಂದಣವರಿಗೆ ಹೇಳುವರಲ್ಲದೆ, ತನ್ನೊಳಗಣ ಶುದ್ಧಿಯ ತಾನರಿಯದೆ ಅನ್ಯರಿಗೆ ಉಪದೇಶವ ಹೇಳುವ ಬಿನುಗುಜಾತಿಗಳ ನುಡಿಯ, ಕೇಳಲಾಗದೆಂದ, ಕಲಿದೇವರದೇವಯ್ಯ.