ವಚನ - 67     
 
ಕಾಳರಕ್ಕಸಿಗೊಬ್ಬ ಮಗ ಹುಟ್ಟಿ, ಕಾಯದ ರಾಶಿಯ ಮೊಗೆವುತ್ತ ಸುರಿವುತ್ತಲಿದ್ದನಯ್ಯಾ! ಕಾಳರಕ್ಕಸಿಯ ಮೂಗು ಮೊಲೆಯ ಕೊಯ್ದು, ದೇವಕನ್ನಿಕೆಯ ಮೊರೆಹೊಕ್ಕು, ಬಾಯ ತುತ್ತೆಲ್ಲವನು ಉಣಲೊಲ್ಲದೆ ಕಾರಿದಡೆ, ಆತನೆ ಭಕ್ತನೆಂದೆಂಬೆ ಗುಹೇಶ್ವರಾ.