Index   ವಚನ - 270    Search  
 
ಮಾಡುವ ಭಕ್ತಂಗೆ, ಒಲಿದ ದೇವಂಗೆ ಭೇದವುಂಟೆ ಅಯ್ಯಾ? ಕಾಯದೊಳಗೆ ಕಾಯವಾಗಿಪ್ಪ, ಪ್ರಾಣದೊಳಗೆ ಪ್ರಾಣವಾಗಿಪ್ಪ. ಅರಿದೆಹೆನೆಂದಡೆ ತಾನೆಯಾಗಿಪ್ಪ. ಅರಸಿ ಬಯಸಿದಡೆ ನಡೆದುಬಹನು. ಕಲಿದೇವರದೇವನ ಬರವನೀಗಳೆ ತೋರಿ ಕೊಟ್ಟಿಹೆನು ಕೇಳಾ, ಸಂಗನಬಸವಣ್ಣ.