Index   ವಚನ - 295    Search  
 
ವೇದ ವಿಪ್ರರ ಬೋಧೆ, ಶಾಸ್ತ್ರ ಸಂತೆಯ ಮಾತು. ಪುರಾಣ ಪುಂಡರ ಗೋಷ್ಠಿ, ಆಗಮ ಅನೃತದ ನುಡಿ. ತರ್ಕ ವ್ಯಾಕರಣ ಕವಿತ್ವ ಪ್ರೌಢಿ. ಇಂತಿವರಂಗದ ಮೇಲೆ ಲಿಂಗವಿಲ್ಲದ ಭಾಷೆ. ಇದು ಕಾರಣ, ತನ್ನೊಳಗನರಿದ ಅನುಭಾವಿಯಿಂದ ಘನವಿಲ್ಲೆಂದ, ಕಲಿದೇವ.