Index   ವಚನ - 323    Search  
 
ಸುಖವೊಂದು ಕೋಟ್ಯನುಕೋಟಿ ಬಂದಲ್ಲಿ ಬಸವಣ್ಣನ ನೆನೆವೆ. ದುಃಖವೊಂದು ಕೋಟ್ಯನುಕೋಟಿ ಬಂದಲ್ಲಿ ಬಸವಣ್ಣನ ನೆನೆವೆ. ಲಿಂಗಾರ್ಚನೆಯ ಮಾಡುವಲ್ಲಿ ಬಸವಣ್ಣನ ನೆನೆವೆ. ಜಂಗಮಾರ್ಚನೆಯ ಮಾಡುವಲ್ಲಿ ಬಸವಣ್ಣನ ನೆನೆವೆ. ಬಸವಣ್ಣನ ನೆನೆದಲ್ಲದೆ ಭಕ್ತಿಯಿಲ್ಲ. ಬಸವಣ್ಣನ ನೆನೆದಲ್ಲದೆ ಮುಕ್ತಿಯಿಲ್ಲ. ಇದು ಕಾರಣ, ಬಸವಣ್ಣ ಬಸವಣ್ಣ ಎನುತಿರ್ದೆನು ಕಾಣಾ, ಕಲಿದೇವಯ್ಯ.