Index   ವಚನ - 328    Search  
 
ಹಣದಾಸೆಗೆ ಹದಿನೆಂಟು ಜಾತಿಯ ಭಕ್ತರ ಮಾಡಿ, ಲಿಂಗವ ಕೊಟ್ಟು ಲಿಂಗದ್ರೋಹಿಯಾದ. ಪ್ರಸಾದವ ನೀಡಿ ಪ್ರಸಾದದ್ರೋಹಿಯಾದ. ಪಂಚಾಕ್ಷರಿಯ ಹೇಳಿ ಪಂಚಮಹಾಪಾತಕಕ್ಕೊಳಗಾದ. ಇಂತೀ ಹೊನ್ನ ಹಂದಿಯ ಕೊಂದು, ಬಿನ್ನಾಣದಲ್ಲಿ ಕಡಿದುತಿಂಬ ಕುನ್ನಿಗಳನೇನೆಂಬೆನಯ್ಯಾ, ಕಲಿದೇವರದೇವ.