Index   ವಚನ - 340    Search  
 
ಹೆಣ್ಣಿಗಾಗಿ ಸತ್ತಡೆ ಜನನ ಮರಣ. ಹೊನ್ನಿಗಾಗಿ ಸತ್ತಡೆ ಜನನ ಮರಣ. ಮಣ್ಣಿಗಾಗಿ ಸತ್ತಡೆ ಜನನ ಮರಣ. ಪರಧನ ಪರಸತಿಗಾಗಿ ಸತ್ತಡೆ ಜನನ ಮರಣ. ಶಿವಭಕ್ತನಾಗಿ ಏಕಲಿಂಗನಿಷ್ಠಾಸಂಪನ್ನನಾಗಿ, ಶಿವಾಚಾರಕ್ಕಾಗಿ ಸತ್ತಡೆ ಮುಕ್ತಿಯೆಂದ ಕಲಿದೇವಯ್ಯ.