Index   ವಚನ - 64    Search  
 
ಪಾಷಾಣದುದಕ ಏತರಿಂದ ದ್ರವ ? ಪಾಷಾಣದ ಪಾವಕ ಅದೇತರಿಂದ ಕ್ರೋಧ ? ಅಪ್ಪುವಿನ ಸಂಚಾರದ ರೂಪು ಅದೇತರ ಒಪ್ಪದಿಂದ ? ಅರಿದರುಹಿಸಿಕೊಂಬ ಅರ್ಕೇಶ್ವರಲಿಂಗನ ಇರವು ಅದೇತರಿಂದ ?