Index   ವಚನ - 11    Search  
 
ಅರಿದೆಹೆನೆಂದು ಕುರುಹಿಟ್ಟು ಇದಿರಿಂಗೆ ಹೇಳುವಾಗ, ಆ ಗುಣ ಅರಿವೋ, ಮರವೆಯೋ ? ಹೋಗಲಂಜಿ, ಹಗೆಯ ಕೈಯಲ್ಲಿ ಹಾದಿಯ ತೋರಿಸಿಕೊಂಬಂತೆ, ತನ್ನನರಿಯದ ಯುಕ್ತಿ, ಇದಿರಿಂಗೆ ಅನ್ಯಬೋಧೆಯುಂಟೆ ? ಈ ಅನ್ಯಭಿನ್ನಕ್ಕೆ ಮೊದಲೆ, ಮನಸಂದಿತ್ತು ಮಾರೇಶ್ವರಾ.