Index   ವಚನ - 44    Search  
 
ಕಾಯವಿಡಿದಿಹನ್ನಬರ ಶಿವಭಕ್ತಂಗೆ ಕಾಯಕವೆ ಕೈಲಾಸ. ಕಾಯಕವಿಲ್ಲದವನ ಅರಿವು ವಾಯವಾಯಿತ್ತು. ಅಡುಗೂಲಿಯ ಮನೆಯಂತೆ ಗಡಿಗೆಯ ಗಂಜಿಯಾಸೆಬೇಡ. ಕೊಡುವರೆಂದೊಬ್ಬರ ಮನೆಗೆ ಅಡಿಗಡಿಗೆ ಹೋಗಬೇಡ. ಇಂತಿವರಡಿಯ ಕಾಬುದಕ್ಕೆ ಮೊದಲೆ ಅಡಗಿದೆಯಲ್ಲಾ, ಮನಸಂದಿತ್ತು ಮಾರೇಶ್ವರಾ.