ವಚನ - 698     
 
ಅಂಗಕ್ಕೆ ಆಚಾರವಾಗಿ ಕಳೆಗಳುಳ್ಳನ್ನಕ್ಕ ಸಕಲ ಪದಾರ್ಥವ ಲಿಂಗಕ್ಕೆ ಕೊಟ್ಟಲ್ಲದೆ ಕೊಳಲಾಗದು. ಲಿಂಗವ ಬಿಟ್ಟು ಕಳೆ ಹಿಂಗಿದ ಬಳಿಕ ಅಂಗವೇನು ಬಲ್ಲುದೊ? ಕಪ್ಪಡಿಯ ಸಂಗಮನಾಥನಲ್ಲಿ ಐಕ್ಯವಾದಂದಿಂಗೆ ನಿಜವ ಮರೆ. ಗುಹೇಶ್ವರಲಿಂಗ ಸಾಕ್ಷಿಯಾಗಿ, ಸಂಗನಬಸವಣ್ಣಾ ಅರ್ಪಿತವಿಲ್ಲದೆ ಕೊಳದಿರು ಅನರ್ಪಿತವ.