Index   ವಚನ - 85    Search  
 
ಮೊದಲಿಗೆ ಮರ ನೀರನೆರೆದಡೆ ಎಳಕುವುದಲ್ಲದೆ, ಕಡೆ ಕಿಗ್ಗೊಂಬಿಗೆರೆದವರುಂಟೆ ? ಅರಿದು ಪೂಜಿಸುವಲ್ಲಿ ಹರಿವುದು ಮನಪಾಶ. ಅರಿದು ಅರ್ಪಿಸುವಲ್ಲಿ ಲಿಂಗದ ಒಡಲೆಲ್ಲ ತೃಪ್ತಿ. ತನ್ನನರಿದಲ್ಲಿ ಸಕಲಜೀವವೆಲ್ಲ ಮುಕ್ತಿ. ತನ್ನ ಸುಖದುಃಖ ಇದಿರಿಗೂ ಸರಿಯೆಂದಲ್ಲಿ, ಅನ್ನಭಿನ್ನವಿಲ್ಲ, ಮನಸಂದಿತ್ತು ಮಾರೇಶ್ವರಾ.