Index   ವಚನ - 711    Search  
 
ಅಂಗದೊಳಗೆ ಲಿಂಗ! ಲಿಂಗದೊಳಗೆ ಅಂಗ! ಅಂಗವಿಲ್ಲದೆ ಬೇರೆ ಸಂಗವಿಲ್ಲ ಕಾಣಿರೆ. ಅದೆಂತೆಂದಡೆ; ``ಲಿಂಗಸ್ಥಲಂ ಶಿವಃ ಸಾಕ್ಷಾತ್ ಜೀವಾತ್ಮಾಂಗಸ್ಥಲಂ ಭವೇತ್| ಲಿಂಗಾಂಗಸ್ಥಲಯೋರೈಕ್ಯಂ ಶಿವಜೀವೈಕ್ಯಮೇವಹಿ||'' ಎಂದುದಾಗಿ. ಲಿಂಗವಿದ್ದೆಡೆಯ ನೀವು ತಿಳಿದು ನೋಡಿ ಕೂಡಿಕೊಳ್ಳಿ. ಕಾಯವಳಿಯದ ಮುನ್ನವೆ ಕೂಡಿಕೊಳ್ಳಬಲ್ಲಡೆ, ಗುಹೇಶ್ವರನು ಬೇರಿಲ್ಲ ಕಾಣಿರೆ.