Index   ವಚನ - 713    Search  
 
ಅಂಗ ಮೂವತ್ತಾರರ ಮೇಲೆ ಲಿಂಗ. ನಿಸ್ಸಂಗವೆಂಬ ಕರದಲ್ಲಿ ಹಿಡಿದು ಅಂಗವಿಸಿ, ಅಹುದು ಆಗದು ಎಂಬ ನಿಸ್ಸಂಗದ ಅರ್ಪಣವ ಮಾಡಿ ಸುಸಂಗ ಪ್ರಸಾದವ ಕೊಳಬಲ್ಲವಂಗೆ ಗುಹೇಶ್ವರಾ, ಮುಂದೆ ಬಯಲು ಬಯಲು ಬಟ್ಟ ಬಯಲು!