ಬಸವಣ್ಣ ಚನ್ನಬಸವಣ್ಣ ಪ್ರಭುದೇವ ಮಡಿವಾಳ ಮಾಚಯ್ಯಾ
ಸಿದ್ಧರಾಮಯ್ಯ ಸೊಡ್ಡಳ ಬಾಚರಸರು ಹಡಪದಪ್ಪಣ್ಣ
ಪಡಿಹಾರಿ ಉತ್ತಣ್ಣ ಅವ್ವೆ ನಾಗಾಯಿ ಕೋಲಶಾಂತಯ್ಯ
ಡೋಹರ ಕಕ್ಕಯ್ಯ ಮೊಗವಾಡದ ಕೇಶಿರಾಜದೇವರು
ಖಂಡೆಯ ಬೊಮ್ಮಣ್ಣ ಮೊದಲಾದ ಅಸಂಖ್ಯಾತ ಮಹಾಪ್ರಮಥಗಣಂಗಳ
ಪರಮಪ್ರಸಾದವ ಕೊಂಡು ಬದುಕಿದೆನಯ್ಯಾ,
ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ,
ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.