ವಚನ - 716     
 
ಅಂಗವಿಡಿದಂಗಿಯನೇನೆಂಬೆ? ಆರನೊಳಕೊಂಡ ಅನುಪಮನು ನೋಡಾ! ಮೂರರ ಹೊಲಿಗೆಯ ಬಿಚ್ಚಿ, ಎಂಟಾತ್ಮ ಹರಿಗಳ ತನ್ನಿಚ್ಛೆಯೊಳ್ ನಿಲಿಸಿದ ನಿಜಸುಖಿಯು ನೋಡಾ. ತತ್ತ್ವ ಮೂವತ್ತಾರ ಮೀರಿ, ಅತ್ತತ್ತವೆ ತೋರ್ಪ ಆಗಮ್ಯನು ನೋಡಾ! ನಮ್ಮ ಗುಹೇಶ್ವರನ ಶರಣ ಅಲ್ಲಯ್ಯನ ಇರವನೊಳಕೊಂಡ ಪರಮಪ್ರಸಾದಿ ಮರುಳಶಂಕರದೇವರ ನಿಲವ ಬಸವಣ್ಣನಿಂದ ಕಂಡೆ ನೋಡಾ ಸಿದ್ಧರಾಮಯ್ಯಾ.