Index   ವಚನ - 1    Search  
 
ಕಾಯದ ಸುಳುಹುಳ್ಳನಕ್ಕ ಕರ್ಮಪೂಜೆ ಬೇಕೆಂಬರು. ಜೀವನ ಸಂಚಾರವಿಳ್ಳನಕ್ಕ ಜ್ಞಾನವನರಿಯಬೇಕೆಂಬರು. ಜ್ಞಾನ ಧ್ಯಾನಿಸಿ ಕಾಬಲ್ಲಿ, ಕಾಯದ ಕರ್ಮದಿಂದ ಮುಕ್ತಿಯೋ ? ಜೀವನ ಜ್ಞಾನದಿಂದ ಮುಕ್ತಿಯೋ? ಜ್ಞಾನ ಧ್ಯಾನದಿಂದ ಮುಕ್ತಿಯೋ ? ಧ್ಯಾನಿಸಿ ಕಾಲ ಕುರುಹ ಎನಗೊಂದುಬಾರಿ ತೋರಾ. ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.