Index   ವಚನ - 7    Search  
 
ವೇದ ಶಾಸ್ತ್ರಕ್ಕೆ ಹಾರುವುನಾಗಿ, ವೀರ ವಿತರಣಕ್ಕೆ ಕ್ಷತ್ರಿಯನಾಗಿ, ಸರ್ವವನಾರೈದು ನೋಡುವಲ್ಲಿ, ವೈಶ್ಯನಾಗಿ ವ್ಯಾಪಾರದೊಳಗಾಗಿ, ಕೃಷಿಯ ಮಾಡುವುದಕ್ಕೆ ಶೂದ್ರವಾಗಿ, ಇಂತೀ ಜಾತಿಗೋತ್ರದೊಳಗಾದ ನೀಚ ಶ್ರೇಷ್ಠವೆಂಬ ಎರಡು ಕುಲವಲ್ಲದೆ, ಹೊಲೆ ಹದಿನೆಂಡುಜಾತಿಯೆಂಬ ಕುಲವಿಲ್ಲ, ಬ್ರಹ್ಮವನರಿದಲ್ಲಿ ಬ್ರಾಹ್ಮಣ. ಸರ್ವಜೀವಹತ ಕರ್ಮಕ್ಕೊಳಗಾಗಿದ್ದಲ್ಲಿ ಸಮಗಾರ. ಈ ಉಭಯವನರಿದು ಮರೆಯಲಿಲ್ಲ, ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.