ವಚನ - 719     
 
ಅಂಗವೆಂಬ ಸಂಸಾರದೊಳಗೆ ಸವೆದವರೆಲ್ಲರೂ ಶಿವನನರಿವರೆ? ಮನವೆಂಬ ಸಂಕಲ್ಪದ ಕುಣಿಕೆಗೊಳಗಾದವರೆಲ್ಲರೂ ಮಾಯದ ಹೊಡೆಗಿಚ್ಚ ಗೆಲ್ಲಬಲ್ಲರೆ? ಗುಹೇಶ್ವರಲಿಂಗದಲ್ಲಿ ಸರ್ವಸಂದೇಹವ ಕಳೆದಿಪ್ಪ ಚೆನ್ನಬಸವಣ್ಣಂಗೆ ನಮೋ ನಮೋ ಎಂದು. ಬದುಕಿದೆನು ಕಾಣಾ ಸಂಗನಬಸವಣ್ಣಾ.