Index   ವಚನ - 10    Search  
 
ಸಾಂಖ್ಯ ಶ್ವಪಚ, ಅಗಸ್ತ್ಯ ಕಬ್ಬಿಲ, ದೂರ್ವಾಸ ಮಚ್ಚಿಗ, ದಧೀಚಿ ಕೀಲಿಗ, ಕಶ್ಯಪ ಕಮ್ಮಾರ, ರೋಮಜ ಕಂಚುಗಾರ, ಕೌಂಡಿಲ್ಯ ನಾವಿದನೆಂಬುದನರಿದು, ಮತ್ತೆ ಕುಲವುಂಟೆಂದು ಛಲಕ್ಕೆ ಹೋರಲೇತಕ್ಕೆ ? ಇಂತೀ ಸಪ್ತಋಷಿಯರುಗಳೆಲ್ಲರೂ ಸತ್ಯದಿಂದ ಮುಕ್ತರಾದುದನರಿಯದೆ, ಅಸತ್ಯದಲ್ಲ ನಡೆದು, ವಿಪ್ರರು ನಾವು ಘನವೆಂದು ಹೋರುವ ಹೊತ್ತುಹೋಕರ ಮಾತೇತಕ್ಕೆ ? ಕೈಯುಳಿ ಕತ್ತಿ ಅಡಿಗೂಂಟಕ್ಕಡಿಯಾಗಬೇಡ, ಅರಿ ನಿಜಾ[ತ್ಮಾ] ರಾಮ ರಾಮನಾ.