Index   ವಚನ - 11    Search  
 
ಅರಿದು ಚುಚ್ಚುವರೆಲ್ಲರೂ ದನದಟ್ಟೆ, ಮರೆದು ಚುಚ್ಚುವರೆಲ್ಲರೂ ದನದಟ್ಟೆ, ನಾ ಚುಚ್ಚುವುದೆಲ್ಲ ಸತ್ತ ಜೀವದನದಟ್ಟೆ. ಅಟ್ಟೆಯ ಕೊಯ್ದು ಮೆಟ್ಟಿಸಿದ ಸತ್ಯರಿಗೆಲ್ಲಕ್ಕೂ ಎನಗೆ ಬಟ್ಟಬಯಲ ತೋರಬೇಕೆಂದು. ನಿಮ್ಮ ಬಟ್ಟೆಯಲ್ಲಿ ನೀವೆ ಹೋಗಿ, ಎನ್ನ ಬಟ್ಟೆ ಕಾಮಧೂಮ ಧೂಳೇಶ್ವರನ ಬಟ್ಟೆಯೇ ಸಾಕು.