Index   ವಚನ - 12    Search  
 
ಅರಿದು ಮರೆದು ಎಚ್ಚತ್ತೆನೆಂಬಲ್ಲಿ ಅರಿವುಂಟೆ ? ತೊಳಗಿ ಬೆಳಗಿ ಪ್ರಜ್ವಲಿಸಿ ಉರಿವ ಬೆಳಗು ಕೆಡುವಲ್ಲಿ, ಉಡುಗುತ್ತಿದ್ದೇನೆ ಎಂದು ನುಡಿಯಿತ್ತೆ ? ಇಂತಿವ ಹಿಡಿವಲ್ಲಿ, ಬಿಡುವಲ್ಲಿ, ಮಿಕ್ಕಾದವ ಒಡಗೂಡುವಲ್ಲಿ, ಅಡಿಯೇರಿದ ಮತ್ತೆ ಪುನರಪಿ ಅಡಿ ಉಂಟೆ ? ತೊಟ್ಟು ಬಿಟ್ಟ ಹಣ್ಣಿಂಗೆ ಮತ್ತಾ ಬುಡದಾಸೆಯೇಕೆ? ನಿಶ್ಚಯವೆಂಬುದು ನಷ್ಟವಾದಲ್ಲಿ, ಕಾಮಧೂಮ ಧೂಳೇಶ್ವರನೆಂಬ ಲಕ್ಷವೇತಕ್ಕೆ ?