Index   ವಚನ - 32    Search  
 
ಎನ್ನ ತನುವ ನಿರ್ಮಲ ಮಾಡಿದನಯ್ಯಾ,ಬಸವಣ್ಣನು. ಎನ್ನ ಮನವ ನಿರ್ಮಲ ಮಾಡಿದನಯ್ಯಾ, ಚೆನ್ನಬಸವಣ್ಣನು. ಎನ್ನ ಪ್ರಾಣವ ನಿರ್ಮಲ ಮಾಡಿದನಯ್ಯಾ, ಪ್ರಭುದೇವರು. ಇಂತೆನ್ನ ತನುಮನಪ್ರಾಣವ ನಿರ್ಮಲ ಮಾಡಿ, ತಮ್ಮೊಳಿಂಬಿಟ್ಟುಕೊಂಡ ಕಾರಣ, ಕಾಮಧೂಮ ಧೂಳೇಶ್ವರಾ ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.