ವಚನ - 723     
 
ಅಂಗೈಯ ಲಿಂಗದಲ್ಲಿ ಕಂಗಳ ನೋಟ ಸ್ವಯವಾದ ಇರವ ನೋಡಾ! ತನ್ನ ಸ್ವಾನುಭಾವದ ಉದಯದಿಂದ ತನ್ನ ತಾನರಿದ ನಿಜಶಕ್ತಿಯ ನೋಡಾ! ಭಿನ್ನವಿಲ್ಲದರಿವು, ಮನ್ನಣೆಯ ಮಮಕಾರವ ಮೀರಿದ ಭಾವ! ತನ್ನಿಂದ ತಾನಾದಳು! ನಮ್ಮ ಗುಹೇಶ್ವರಲಿಂಗದಲ್ಲಿ ಸ್ವಯಲಿಂಗವಾದ ಮಹಾದೇವಿಯಕ್ಕಗಳ ನಿಲವಿಂಗೆ ನಮೋ ನಮೋ ಎನುತಿರ್ದೆನು ಕಾಣಾ ಚೆನ್ನಬಸವಣ್ಣಾ.