ನಾನಾ ಜೀವದ ನೋವು ಒಂದೆಂದಲ್ಲಿ,
ಮರಣಕ್ಕೆ ನಾನಾ ಭೇದಂಗಳುಂಟು.
ಯೋನಿಯ ಕೂಟದ ಸುಖವೊಂದೆಂದಲ್ಲಿ,
ಯೋಗ ನಾನಾ ಭೇದಂಗಳುಂಟು.
ನಾನಾ ಸ್ಥಳಂಗಳ ಭೇದಿಸಿ, ವೇಧಿಸಿ, ಮೆಟ್ಟಿ ನೋಡಲಿಕ್ಕೆ
ಇಂದ್ರಿಯಂಗಳಿಗೆ ಭಿನ್ನರೂಪಾಗಿ ತೋರುತ್ತಿಹವು.
ಅದೇತರ ಗುಣವೆಂದು ನಿರಾಕರಿಸಿ ನೋಡಲಿಕ್ಕೆಅದಂತೆ ಇದ್ದಿತ್ತು.
ಅಂತೆಯಿದ್ದ ಮೇಲೆ ಅಂತೆಯಿಂತೆಯೆನಲಿಲ್ಲ.
ಆ ಗುಣ ಚಿಂತನೆಗೆ ಹೊರಗು, ಕಾಮಧೂಮ ಧೂಳೇಶ್ವರನು.