Index   ವಚನ - 87    Search  
 
ಮೆಟ್ಟಿದ ಅಡಿಯ ದೃಢವಾಗಿ ಮೆಟ್ಟಿ, ಆಚೆಯಲ್ಲಿ ಕಿತ್ತಡಿಯಿಡಬೇಕು. ಮುಂದಕ್ಕೆ ಒದಗು, ಹಿಂದಕ್ಕೆ ದೂರವಾಯಿತ್ತು. ಇಷ್ಟದಲ್ಲಿ ಚಿತ್ತ ನೆಮ್ಮಿ, ಮತ್ತೆ ಪ್ರಾಣನ ಪಥ್ಯವನರಿಯಬೇಕು. ಫಲದ ತೊಡಪು ಕೈಗೆ ತಾಹಂತೆ, ಘಟಜ್ಞಾನಕ್ಕೆ ಭಿನ್ನವಿಲ್ಲ, ಐಘಟದೂರ ರಾಮೇಶ್ವರಲಿಂಗವನರಿವುದಕ್ಕೆ.