Index   ವಚನ - 741    Search  
 
ಅಕಾರದಾದಿಯನರಿ, ಕ್ಷಕಾರದಂತ್ಯವ ತಿಳಿ. ಅಕಾರ ಉಕಾರ ಮಕಾರದೊಳಗಣ ಓಂಕಾರಪ್ರಭೆಯ ತಿಳಿ. ವೇದಾದಿ ಪಂಚಕದಾದಿಯನರಿ. ಐಶ್ವರ್ಯ ಮೊದಲಾದೈದು ನಾಮವನುಳ್ಳ ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆ ಎಂಬೈದು ನಿನ್ನಭಿಮುಖದಿಂದ ಜನನವೆ ಹೇಳು ಗುಹೇಶ್ವರಾ?