Index   ವಚನ - 13    Search  
 
ಅಂಧಕ ಪಂಗುಳನಾದ, ಪಂಗುಳ ಅಂಧಕನಾದ. ಈ ಉಭಯದ ಬೆಂಬಳಿಯನರಿಯಬೇಕು. ಮಂಜರಿ ವಿಹಂಗನ ಕೊಂದು ಉಭಯವನರಿಯಬೇಕು. ಪರಮ ಜೀವನದೊಳಗಡಗಿ ಪರಮನಾದ ಉಭಯವ ತಿಳಿಯಬೇಕು. ಬೆಂಕಿ ಮರದೊಳಗಿದ್ದು, ಮಥನದಿಂದ ಮರ ಸುಟ್ಟು, ಮರ ಬೆಂಕಿಯಾದ ತೆರನನರಿತಡೆ ಪ್ರಾಣಲಿಂಗಸಂಬಂಧಿ. ಪ್ರಾಣಲಿಂಗವೆಂಬುಭಯ ಸಮಯ ನಿಂದಲ್ಲಿ, ಐಕ್ಯಾನುಭಾವ, ನಿಃಕಳಂಕ ಮಲ್ಲಿಕಾರ್ಜುನಾ.