Index   ವಚನ - 746    Search  
 
ಅಜ್ಞಾನ ಸುಜ್ಞಾನಗಳೆರಡೂ ಶಿವನೆಂದಡೆ ಶಿವಜ್ಞಾನಿಗಳು ಮೆಚ್ಚುವರೆ? ಶಿವ ಶಕ್ತಿಗಳೆರಡೂ ನೀನೆ ಎಂದಡೆ ಮಹಾನುಭಾವಿಗಳು ಪರಿಣಾಮಿಸುವರೆ? ತನ್ನ ತಾನಾರೆಂಬುದನರಿಯದೆ, ಅನ್ಯವೆಲ್ಲವೂ ಬೊಮ್ಮವೆಂಬ, ಈ ಕರ್ಮದ ನುಡಿಯ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು?