Index   ವಚನ - 20    Search  
 
ಅಚ್ಚಿನಲ್ಲಿ ಬೆಟ್ಟದ ರೂಹು ದೃಷ್ಟವಾಯಿತ್ತು. ಮನಮಚ್ಚಿ ಕೊಟ್ಟ ಲಿಂಗ, ಹೃತ್ಕಮಲದಲ್ಲಿ ಮುಟ್ಟಿದುದಿಲ್ಲ. ತಾ ದೃಷ್ಟಿತನಾದಲ್ಲದೆ ಇದಿರಿಂಗಿಷ್ಟವ ಕಟ್ಟಬಾರದು. ಕಟ್ಟಿಕೊಂಡು ಮತ್ತೆ ಗುರಿಯನೆಚ್ಚ ಕೈಯ ಲಾಹರಿಯಂತಿಬೇಕು. ರಣವ ಗೆಲಿದ ಧೀರನ ಉದಾರದಂತಿರಬೇಕು. ಹೀಂಗಲ್ಲದೆ ಗುರುಸಂಬಂಧವೆಲ್ಲ ಮಡಕೆಯ ಮರೆಯ ಕ್ಷೀರದಂತೆ ಕೈಗುಡಿತೆಗೆ ಬಂದುದಿಲ್ಲ, ಈ ಗುರುಸ್ಥಲವೆಂದಡಕವೇಕೆ, ನಿಃಕಳಂಕ ಮಲ್ಲಿಕಾರ್ಜುನಾ?