ಆತ್ಮ ತೇಜಕ್ಕೆ ಬೀಗಿ ಬೆರೆದು, ಶಾಸ್ತ್ರದ ಸಂತೋಷಕ್ಕೆ ಸಾಧ್ಯವಾದಿಹಿತೆಂದು,
ವಚನದ ರಚನೆಗೆ ರಚಿಸಿದೆನೆಂದು,
ತರ್ಕಕ್ಕೆ ಹೊತ್ತು ಹೋರುವನ್ನಕ್ಕರ ಗುರುವೆಂತಾದಿರೊ ?
ಘಟದ ಮಧ್ಯದಲ್ಲಿ ಪೂಜಿಸಿಕೊಂಬವನಾರೆಂದು ಅರಿಯದೆ,
ಫಲವ ಹೊತ್ತಿರ್ಪ ಮರನಂತೆ, ಕ್ಷೀರವ ಹೊತ್ತಿರ್ಪ ಕೆಚ್ಚಲಂತೆ,
ನಿನ್ನ ನೀನೆ ತಿಳಿದು ನೋಡಾ, ನಿಃಕಳಂಕ ಮಲ್ಲಿಕಾರ್ಜುನಾ.