Index   ವಚನ - 120    Search  
 
ಇಷ್ಟಲಿಂಗಸಂಬಂಧಿಗಳು ಭಕ್ತಿಸ್ಥಲವನರಿಯರು. ಪ್ರಾಣಲಿಂಗಸಂಬಂಧಿಗಳು ಮಾಹೇಶ್ವರಸ್ಥಲವನರಿಯರು. ಪ್ರಸಾದಲಿಂಗಸಂಬಂಧಿಗಳು ಪ್ರಾಣಲಿಂಗಸ್ಥಲವನರಿಯರು. ಶರಣಸ್ಥಲಭರಿತರು ಪ್ರಾಣಲಿಂಗಸಂಬಂಧವನರಿಯರು. ಐಕ್ಯ ನಿರ್ಲೇಪವಾದಲ್ಲಿ ಶರಣಸ್ಥಲ ನಿಂದಿತ್ತು. ಇಂತೀ ಐದು ಸ್ಥಲವ ಆರೋಪಿಸಿ, ಇದಿರಿಟ್ಟು ಕೂಡಿದಲ್ಲಿ ಆರುಸ್ಥಲವಾಯಿತ್ತು. ಆರುಸ್ಥಲ ವೇಧಿಸಿ ನಿಂದಲ್ಲಿ, ನೀ ನಾನೆಂಬ ಭಾವ, ಎಲ್ಲಿ ಅಡಗಿತ್ತು ಹೇಳಾ, ನಿಃಕಳಂಕ ಮಲ್ಲಿಕಾರ್ಜುನಾ.