Index   ವಚನ - 140    Search  
 
ಉಪೇಕ್ಷೆಯಿಂದ ಉರಿವ ಬೆಳಗು, ಪವನನ ಪ್ರಾಣಕ್ಕೆ ಒಳಗು. ಸ್ವಯಸಂಪರ್ಕದಿಂದ ಒದಗಿದ ಬೆಳಗು, ಅನಲನ ಆಹುತಿಗೆ ಹೊರಗಾಗಿಪ್ಪುದು. ಇಂತೀ ವಾಗದ್ವೈತದ ಮಾತಿನ ಮಾಲೆ, ಸ್ವಯಾದ್ವೈತವ ಮುಟ್ಟಬಲ್ಲುದೆ ? ಸ್ಥಲಜ್ಞಾನ, ಯಾಚಕತ್ವ, ಸ್ಥಲಭರಿತನ ಮುಟ್ಟಬಲ್ಲುದೆ ? ಇಂತೀ ಉಭಯದೊಳಗನರಿತು, ಇಷ್ಟಕ್ಕೆ ಕ್ರೀ, ಭಾವಕ್ಕೆ ಜ್ಞಾನ ಸಂಪೂರ್ಣವಾದಲ್ಲಿ, ನಿಃಕಳಂಕ ಮಲ್ಲಿಕಾರ್ಜುನ ತಾನು ತಾನೆ.