Index   ವಚನ - 187    Search  
 
ಒಡೆಯರು ದೇವರಿಗೆ ಕೊಟ್ಟಲ್ಲದೆ, ಕೊಳ್ಳೆನೆಂಬ ಮೃಡನ ಭಕ್ತರ ನೋಡಾ. ಒಡೆಯರಿಗೊಂದು ಪರಿ, ತನಗೊಂದು ಪರಿ ಮಾಡುವ ಸಡಗರವ ನೋಡಾ. ಒಡೆಯಂಗೆ ಭೆಟ್ಟಿ, ಮನೆಯೊಡಯಂಗೆ ತುಪ್ಪ ಕಟ್ಟುಮೊಸರು ಮೃಷ್ಟಾನ್ನ. ಒಡೆಯರಿಗೆ ಕುರುಹ ತೋರಿ, ತಾ ಹಿರಿದಾಗಿ ಉಂಬ ಕಡುಗಲಿಯ ನೋಡಾ. ಇವರಡಿಯಲ್ಲಿ ಬಂದಡೆ, ಇವರನೊಡಗೂಡಿ ನುಡಿದೆನಾದಡೆ, ಜೇನಗಡಿಗೆಯಲ್ಲಿ ಬಿದ್ದ ಗುದಿಮಕ್ಷಿಕನಂತೆ, ನಿಃಕಳಂಕ ಮಲ್ಲಿಕಾರ್ಜುನಾ.