Index   ವಚನ - 271    Search  
 
ಕೂಟಗೆಯ ಕೂಳನುಣ್ಣಬಂದವರೆಲ್ಲರೂ ಅಜಾತನ ನಿಲವ ಬಲ್ಲರೆ ? ಬೇಟದ ಕಣ್ಣಿನವರೆಲ್ಲರೂ ಸಕಳೇಶನ ಬಲ್ಲರೆ ? ಈ ಷಣತ್ರಯವ ಕೂಡುವರೆಲ್ಲರೂ ಪರದೇಶಿಗನ ಕೂಡಬಲ್ಲರೆ ? ಆಶೆಯೆಂಬ ಕೊಳದಲ್ಲಿದ್ದು, ನಿರಾಶೆಯ ನಿರ್ನಾಮವ ಬಲ್ಲರೆ ? ದೋಷದೂರ ನಿರ್ಜಾತನು ನೀನೆ, ನಿಃಕಳಂಕ ಮಲ್ಲಿಕಾರ್ಜುನಾ.