Index   ವಚನ - 280    Search  
 
ಕೈಯಲ್ಲಿ ಹಿಡಿದಡೆ ಕಲ್ಲು ಸಿಕ್ಕಿತ್ತಲ್ಲದೆ, ಲಿಂಗವಿಲ್ಲಾ ಎಂದೆ. ಕಣ್ಣಿನಲ್ಲಿ ನೋಡಿ ಕವಳೀಕರಿಸಿದೆನೆಂದಡೆ ಅದು ಕವುಳಿಕವೆಂಬೆ. ಮನದಲ್ಲಿ ನೆನೆದು ಘನದಲ್ಲಿ ನಿಂದೆಹೆನೆಂದಡೆ ಭವಕ್ಕೆ ಬೀಜವೆಂದೆ. ಕೈಗೂ ಕಣ್ಣಿಗೂ ಮನಕ್ಕೂ ಬಹಾಗ ತೊತ್ತಿನ ಕೂಸೆ ? ಕಂಡಕಂಡವರ ಅಪ್ಪಾ ಅಪ್ಪಾ ಎಂಬ ಇಂತೀ ಸುಚಿತ್ತರನರಿಯದೆ, ಉದ್ಯೋಗಿಸಿ ನುಡಿವ ಜಗದ ಭಂಡಕರನೊಲ್ಲೆನೆಂದ, ನಿಃಕಳಂಕ ಮಲ್ಲಿಕಾರ್ಜುನ.