Index   ವಚನ - 299    Search  
 
ಗಾಜಿನ ಗೋಡೆಯ ಸುಣ್ಣ ವೇಧಿಸಬಲ್ಲುದೆ ? ನಾಗರಹೆಡೆಯ ಚಿಕ್ಕೆರ ಬಲ್ಲುದೆ ? ಉರಿಯ ಪುತ್ಥಳಿಯ ಅರಗು ಮುಟ್ಟಿ ಅಪ್ಪಬಲ್ಲುದೆ ? ಲಿಂಗಮಯ ಸಿರಿವಂತರ ಅಂಗವ ಸಂಗಿಸಬಲ್ಲವೆ ಇಂದ್ರಿಯಂಗಳು, ಇಂತೀ ಗುಣವ ಹಿಂಗಿ, ಲಿಂಗವೆ ತಾನಾಗಿಪ್ಪ ನಿಃಕಳಂಕ ಮಲ್ಲಿಕಾರ್ಜುನನ ?