Index   ವಚನ - 308    Search  
 
ಗುರುಭಕ್ತನಾದಡೆ ತನುವಿನಾಸೆಯ ಬಿಡಬೇಕು. ಲಿಂಗಭಕ್ತನಾದಡೆ ಮನದಾಸೆಯ ಬಿಡಬೇಕು. ಜಂಗಮಭಕ್ತನಾದಡೆ ಧನದಾಸೆಯ ಬಿಡಬೇಕು. ಗುರುವಿನ ಅನುವನರಿಯನಾಗಿ ಗುರು ಸಂಬಂಧಿಯಲ್ಲ. ಲಿಂಗದ ನಿಲವನರಿಯನಾಗಿ ಲಿಂಗಸಂಬಂಧಿಯಲ್ಲ. ಜಂಗಮದಲ್ಲಿ ನಿಜವನರಿಯನಾಗಿ ಜಂಗಮ ಸಂಬಂಧಿಯಲ್ಲ. ಇದು ಕಾರಣ, ಗುರುಲಿಂಗಜಂಗಮವನರಿಯಲೇ ಆಗದು, ನೆರೆ ಅರಿದಡೆ, ಅರಿಯಬೇಕು ನಿಃಕಳಂಕ ಮಲ್ಲಿಕಾರ್ಜುನಲ್ಲಿ. ಆ ಶರಣ ಉರಿಯುಂಡ ಕರ್ಪುರದಂತೆ.